ಮಲೇಬೆನ್ನೂರು ಸಮೀಪದ ಧೂಳೆಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಹೊಳೆಸಿರಿಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ದುರುಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಶ್ರೀಮತಿ ಕವಿತಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
September 14, 2024