ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಇಂದು ಬೆಳಿಗ್ಗೆ 10.30 ಕ್ಕೆ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ, ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಸಚಿವ ಶಾಮನೂರು ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾವಚಿತ್ರಗಳ ಅನಾವರಣಗೊಳಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಕೆ.ಅಬ್ದುಲ್ ಜಬ್ಬಾರ್, ಮೇಯರ್ ವಿನಾಯಕ ಬಿ.ಹೆಚ್, ಉಪಮೇಯರ್ ಯಶೋಧ ಯಗ್ಗಪ್ಪ, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ.ಜಿ.ಎಂ, ಎಸ್ಪಿ ಉಮಾ ಪ್ರಶಾಂತ್, ಜಿ.ಪಂ. ಸಿಇಓ ಸುರೇಶ್ ಬಿ. ಇಟ್ನಾಳ್, ಪಾಲಿಕೆ ಆಯುಕ್ತೆ ರೇಣುಕಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್.ಒಡೇನಪುರ, ತಹಶೀಲ್ದಾರ್ ಡಾ. ಅಶ್ವತ್ಥ್ ಎಂ.ಬಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಮಭೋವಿ ಉಪಸ್ಥಿತರಿರುವರು.
ವಾಣಿಜ್ಯ ತೆರಿಗೆ ಪರಿವೀಕ್ಷಕ ಪ್ರವೀಣ್ ಕುಮಾರ್ ಹೆಚ್.ಎಂ ಉಪನ್ಯಾಸ ನೀಡಲಿದ್ದಾರೆ.