ದಾವಣಗೆರೆ, ಸೆ. 4 – ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿದ ದಾವಣಗೆರೆ ಜಿಲ್ಲೆಯ ಆರ್ಯ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದೇ ದಿನಾಂಕ 20 ಅರ್ಜಿ ಸಲ್ಲಿಸಲು ಕೊನೆ ದಿನ. ಅರ್ಜಿಗಳನ್ನು ನಿಲಯ ಪಾಲಕರು, ಜಿಲ್ಲಾ ಆರ್ಯ ಈಡಿಗರ ಸಂಘ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಕಳುಹಿಸಬಹುದಾಗಿದೆ. ವಿವರಕ್ಕೆ ಎ. ನಾಗರಾಜ್, (9845355008), ಹಾಸ್ಟೆಲ್ ವಾರ್ಡನ್ (88922 66468) ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.