ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ಮತ್ತು ದೃಷ್ಟಿ ದೋಷ ನಿಯಂತ್ರಣ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ 39ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆಯನ್ನು ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ.ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿಸೋಜ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣನವರ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ಅಶೋಕ ಕುಮಾರ ಪಾಳೇದ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಮಂಜುನಾಥ್ ಎಲ್. ಪಾಟೀಲ್ ಭಾಗವಹಿಸುವರು. ನೇತ್ರ ತಜ್ಞರಾದ ಡಾ. ಸವಿತಾ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.