ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇಂದು ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಇಓ ಡಿ.ದುರುಗಪ್ಪ ತಿಳಿಸಿದರು. ಬೆಳಗ್ಗೆ 8 ಗಂಟೆಗೆ ಹರಿಹರೇಶ್ವರ ದೇವಸ್ಥಾನದ ಆವರಣದಿಂದ ಡಾ. ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಬೆಳಗ್ಗೆ 10 ಕ್ಕೆ ವೇದಿಕೆಯ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಾಸಕ ಬಿ.ಪಿ. ಹರೀಶ್ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ, ತಹಶೀಲ್ದಾರ್ ಗುರುಬಸವರಾಜ್, ತಾಪಂ ಇಓ ಎಸ್.ಪಿ. ಸುಮಲತಾ ಚಂದ್ರಶೇಖರ್, ಸಿಪಿಐ ಎಸ್. ದೇವಾನಂದ್, ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದಾರೆ. ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಡಾ. ಎಂ. ಮಂಜಣ್ಣ ಉಪನ್ಯಾಸ ನೀಡಲಿದ್ದಾರೆ.