ದಾವಣಗೆರೆ, ಸೆ.5- ಸಾರ್ವಜನಿಕರು ಅನಧಿಕೃತ ಚೀಟಿ ಸಂಸ್ಥೆ ಅಥವಾ ವ್ಯಕ್ತಿಗಳೊಂದಿಗೆ ವ್ಯವಹರಿಸಿ ಮೋಸ ಹೋಗಬಾರದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಮಧು ಶ್ರೀನಿವಾಸ್ ಟಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅನಧಿಕೃತ ಚೀಟಿ ಸಂಸ್ಥೆಗಳು ಗ್ರಾಹಕರಿಗೆ ಮೋಸ ಮಾಡಿದ ಪ್ರಕರಣಗಳ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಚೀಟಿ ಸಂಸ್ಥೆ ಅಧಿಕೃತವಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡು ವ್ಯವಹರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.