ಹರಿಹರ, ಸೆ. 10 – ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ವತಿಯಿಂದ ಬೀಡಿ ಹಾಗೂ ಗಣಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಒಂದನೇ ತರಗತಿಯಿಂದ ಪದವಿ ಮಟ್ಟದ ವರೆಗೂ ಅಭ್ಯಾಸ ಮಾಡುತ್ತಿರುವ ಬೀಡಿ ಹಾಗೂ ಗಣಿ ಕಾರ್ಮಿಕರ ಮಕ್ಕಳು ಆನ್‌ಲೈನ್ ವೆಬ್‌ಸೈಟ್ ವಿಳಾಸ – scholarship.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಒಂದನೇ ತರಗತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಅಭ್ಯಾಸ ಮಾಡುತ್ತಿರುವವರು ಅಕ್ಟೋಬರ್ 31 ರೊಳಗಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹರಿಹರದ ಬೀಡಿ ಕಾರ್ಮಿಕರ ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.