ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ದಾವಣಗೆರೆ, ಸೆ.10- ಶ್ರೀ ಗಣೇಶ ಮೂರ್ತಿ ಮೆರವಣಿಗೆ ಹಾಗೂ ಇದೇ ದಿನಾಂಕ 16 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಆದೇಶಿಸಿದ್ದಾರೆ.

ನಾಳೆ ದಿನಾಂಕ 11 ಮತ್ತು ಇದೇ ದಿನಾಂಕ 16 ರಂದು ದಾವಣಗೆರೆ ಜಿಲ್ಲೆಯಾದ್ಯಂತ, ದಿನಾಂಕ 15 ರಂದು ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಸರಬ ರಾಜು ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!