ಡಿಆರ್ಆರ್ ವಿದ್ಯಾ ಸಂಸ್ಥೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ವಿದ್ಯಾ ಸಂಸ್ಥೆಯ ಸಂಸ್ಥಾಪಕ ದಿ. ಆರ್.ಆರ್. ಶ್ರೀನಿವಾಸ್ ಮೂರ್ತಿ ಅವರ ಸ್ಮರಣಾರ್ಥ ನಗರ ಮಟ್ಟದ ಸಾಹಿತ್ಯ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಆರ್.ಆರ್. ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯುವ ಬೆಳಗಿನ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಹೆಚ್.ಬಿ. ಮಂಜುನಾಥ್ ಉದ್ಘಾಟಿಸುವರು. ಸಂಸ್ಥೆಯ ಆಡಳಿತಾಧಿಕಾರಿ ಎಂ. ಬಸವರಾಜಪ್ಪ ಪ್ರಾಸ್ತಾವಿಕ ನುಡಿಯಾಡುವರು. ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ. ಅನಿತಾ ದೊಡ್ಡ ಗೌಡರ್ ಸಮಾರೋಪ ಭಾಷಣ ಮಾಡುವರು.
October 9, 2024