ಆನಗೋಡಿನಲ್ಲಿ ನಾಳೆ ರೈತ ಹುತಾತ್ಮರ ಸ್ಮರಣೆ

ದಾವಣಗೆರೆ, ಸೆ.11- ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ, ದಾವಣಗೆೆರೆ ಜಿಲ್ಲೆಯ ರೈತಪರ ಸಂಘಟನೆಗಳ ಸಹಯೋಗದಲ್ಲಿ ನಾಡಿದ್ದು ದಿನಾಂಕ 13 ರ ಶುಕ್ರವಾರ ಮಧ್ಯಾಹ್ನ 12 ಕ್ಕೆ ಆನಗೋಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ (ಉಳುಪಿನಕಟ್ಟೆ ಕ್ರಾಸ್) ಇರುವ ರೈತ ಹುತಾತ್ಮರ ಸಮಾಧಿ ಬಳಿ ಓಬೇನಹಳ್ಳಿ ದಿ. ಕಲ್ಲಿಂಗಪ್ಪ, ಸಿದ್ಧನೂರು ದಿ. ನಾಗರಾಜಚಾರ್ ಅವರ 32 ನೇ ವರ್ಷದ ರೈತ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಜಿ. ಪುಟ್ಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವನಾಯ್ಕ, ಶಾಸಕ ಕೆ.ಎಸ್.ಬಸವಂತಪ್ಪ, ಸಮಿತಿ ಗೌರವಾಧ್ಯಕ್ಷ ಆನಗೋಡು ನಂಜುಂಡಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ. ಸಿಇಓ ಸುರೇಶ್ ಬಿ. ಇಟ್ನಾಳ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎನ್. ತೀರ್ಥೇಶ್, ತಹಶೀಲ್ದಾರ್ ಡಾ. ಎಂ.ವಿ. ಅಶ್ವತ್ಥ್‌, ಕಾರ್ಯಪಾಲಕ ಇಂಜಿನಿಯರ್ ಟಾಟಾ ಶಿವನ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎನ್. ಶಿವಮೂರ್ತಿ ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದಾರೆ.

ಶಾಮನೂರು ಹೆಚ್.ಆರ್. ಲಿಂಗರಾಜ್, ಕಕ್ಕರಗೊಳ್ಳದ ಕೆ.ಪಿ. ಕಲ್ಲಿಂಗಪ್ಪ, ಆವರಗೆರೆ ರುದ್ರಮುನಿ, ಹೆಚ್.ಎನ್. ಶಿವಕುಮಾರ್, ಮಟ್ಟಿಕಲ್ ವೀರಭದ್ರಸ್ವಾಮಿ, ತುಂಬಿಗೆರೆ ಗಂಗಾಧರಪ್ಪ, ರಾಜಶೇಖರ್, ಅಣಜಿ ಬಸವರಾಜ್, ಮೋಹನ್ ಕುಮಾರ್, ಚಟ್ಟೋಬನಹಳ್ಳಿ ಕಂಪ್ಲೇಶ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

error: Content is protected !!