ದಾವಣಗೆರೆ, ಸೆ.11 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದಿಂದ ನಾಡಿದ್ದು ದಿನಾಂಕ 13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 8105122556, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.