ದಾವಣಗೆರೆ, ಸೆ.13- ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿಲುವು ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಾಳೆ ದಿನಾಂಕ 14ರ ಶನಿವಾರ ಬೆಳಿಗ್ಗೆ 10ಕ್ಕೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ದೇಶದ ಪ್ರಜೆ ಎಂಬುದನ್ನೇ ಮರೆತು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಸದಸ್ಯ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ಬಸವರಾಜ ನಾಯ್ಕ ಮಾತನಾಡಿದರು. ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್, ಎಸ್ಸಿ ಮೋರ್ಚಾದ ಮಂಜನಾಯ್ಕ, ಜಿ. ಗಂಗಾಧರ್, ಸುರೇಶ್, ರಮೇಶ್, ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.