ದಾವಣಗೆರೆ, ಸೆ.15- ಜಿಲ್ಲೆಯ ಬಿಜೆಪಿ ಮುಖಂಡರು ಸಾಮರಸ್ಯ ಹಾಳು ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಮಟ್ಟಿಕಲ್ ವೀರಭದ್ರಸ್ವಾಮಿ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡ ಕುರಿತು ಬಿಜೆಪಿ ಮುಖಂಡರು ಆರೋಪ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಹಿಂದುತ್ವಕ್ಕಾಗಿ ಹೋರಾಟ ಮಾಡಿದ ಯಾರಿಗೂ ಉಪಕಾರ ಮಾಡಿಲ್ಲ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಯಿಪೇಟೆ ಹಾಲೇಶ್, ಕರೂರು ಗಣೇಶ್, ಸಿರಿಗೆರೆ ಬಸವರಾಜ್, ಅಣಜಿ ಬಸವರಾಜ್, ಹೆಚ್.ರುದ್ರೇಶ್ ಆನೆಕೊಂಡ ಇದ್ದರು.