ದಾವಣಗೆರೆ, ಸೆ. 15 – ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಟಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕಾ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಪರಿಶಿಷ್ಟ ಜಾತಿ ಯುವಕ, ಯುವತಿಯರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ವೇಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಇದೇ ದಿನಾಂಕ 17 ರ ಒಳಗಾಗಿ ಸಲ್ಲಿಸಬೇಕು..
ಹೆಚ್ಚಿನ ವಿವರಗಳಿಗೆ ದೂ.ಸಂ. 08192-237480 ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.