ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ), ಶಾಲಾ ಶಿಕ್ಷಣ ಇಲಾಖೆಯಿಂದ ಎಜು ಏಷಿಯಾ ಶಾಲೆಯ ಸಭಾಂಗಣ ದಲ್ಲಿ ಇಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ಕಾರ್ಯಕ್ರಮ ಉದ್ಘಾಟಿ ಸಲಿದ್ದು, ಡಯಟ್ ಪ್ರಾಚಾರ್ಯ ರಾದ ಎಸ್. ಗೀತಾ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಎಎಂಎಸ್ ಅಧ್ಯಕ್ಷ ಎಂ.ಎಸ್. ಸಂತೋಷ್ ಕುಮಾರ್, ಡಯಟ್ ಹಿರಿಯ ಉಪನ್ಯಾಸಕರಾದ ಮೊಹಮ್ಮದ್ ಅಯೂಬ್ ಸೊರಬ್, ಎಂ. ಮಂಜುನಾಥ್ ಸ್ವಾಮಿ, ಹೆಚ್.ಆರ್. ವಿಶಾಲಾಕ್ಷಿ, ಎನ್.ಎಸ್. ವಾಣಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
January 9, 2025