ನಗರದಲ್ಲಿ ಇಂದು ಜಿಲ್ಲಾ ಅತ್ಯುತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರದಾನ

ದಾವಣಗೆರೆ, ಸೆ.19- ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಾಳೆ ದಿನಾಂಕ 20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಮಂಜುನಾಥ್ ಅಗಡಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಸಿಇಓ ಸುರೇಶ್ ಇಟ್ನಾಳ್, ಡಿಡಿಪಿಐ ಜಿ. ಕೊಟ್ರೇಶ್, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಎಂ.ಎನ್. ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬಿ. ಅನಸೂಯ, ಜೆ. ಮೈನುದ್ದೀನ್, ಹೆಚ್.ಜೆ. ಸಹನಾ ರವಿ, ಸಿ. ಶ್ರೀರಾಮಮೂರ್ತಿ, ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.

error: Content is protected !!