ನಗರದಲ್ಲಿ ನಾಳೆ ಉದ್ಯೋಗ ಮೇಳ

ದಾವಣಗೆರೆ, ಸೆ. 19 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 21 ರ ಶನಿವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ-51),  ದಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ. 

ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರ್ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) ಎಎನ್‍ಎಮ್, ಜಿಎನ್‍ಎಮ್, ಬಿ.ಎಸ್ಸಿ ನರ್ಸಿಂಗ್ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 7483808321, 08192-259446.  

error: Content is protected !!