ದಾವಣಗೆರೆ, ಸೆ. 26- ಹೆಚ್ಎಎಲ್ ವತಿಯಿಂದ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 5ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು apprenticeshipindia.gov.in ಈ ವೆಬ್‍ಸೈಟ್‍ನಲ್ಲಿ ಅಪ್ರೆಂಟೀಸ್‍ಗಾಗಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆ ತರತಕ್ಕದ್ದು. ಮಾಹಿತಿಗಾಗಿ 08192-259446, 7406323294 ಸಂಪರ್ಕಿಸಿ.
November 27, 2024