ದಾವಣಗೆರೆ, ಸೆ. 26 – ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳಿಗೆ ತಡೆ ಹಾಕಲು ಸಂಚು ರೂಪಿಸಿದವು. ಇದು ಸಾಧ್ಯವಾಗದಿದ್ದಕ್ಕೆ ಸರ್ಕಾರ ಹಾಗೂ ಸಿದ್ದರಾಮಯ್ಯರ ಇಮೇಜ್‌ಗೆ ಮಸಿ ಬಳಿಯಲು ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ ಎಂದು ನಗರಸಭಾ ಮಾಜಿ ಅಧ್ಯಕ್ಷ ಬಿ. ವೀರಣ್ಣ ಹೇಳಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ರಾಜಭವನ ಈಗ ರಾಜಕೀಯ ಭವನ ಆಗಿದೆ ಎಂದು ಅವರು ಕಿಡಿಕಾರಿದ್ದಾರೆ.ಸಿದ್ದರಾಮಯ್ಯರ ಅವರ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
February 25, 2025