ನಗರದಲ್ಲಿ ಇಂದು ಸರ್.ಎಂ.ವಿ. ಜನ್ಮದಿನಾಚರಣೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಡಾ. ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸು ವರು. ಡಿ.ಆರ್.ಆರ್. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಸಿ.ಆರ್. ವಿಶ್ವೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ  ಡಾ. ಗಂಗಾಧರಯ್ಯ ಹಿರೇಮಠ `ಭಾರತ ರತ್ನ ಡಾ. ಸರ್.ಎಂ. ವಿಶ್ವೇಶ್ವರಯ್ಯ ಅವರ ಬದುಕು, ಸಾಧನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಿದ ಕೊಡುಗೆ’ ಕುರಿತು ಉಪನ್ಯಾಸ ನೀಡುವರು. ಇದೇ ವೇಳೆ ವಿಶ್ರಾಂತ ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್. ಗುರುಮೂರ್ತಿ ಅವರನ್ನು ಸನ್ಮಾನಿಸಲಾಗುವುದು. 

error: Content is protected !!