ದಾವಣಗೆರೆ, ಸೆ. 26 – ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಪುರಸ್ಕೃತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2024-25ನೇ ಸಾಲಿನಲ್ಲಿ ಮುಂದುವರೆಸಿ ಅನುಷ್ಠಾನಗೊಳಿಸಲಾಗಿದೆ.
ಅರ್ಹ ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಜೋಡಣೆ, ಇ-ಕೆವೈಸಿ ಬಾಕಿ, ಏಕ ಕುಟುಂಬ ಸದಸ್ಯರ ದೃಢೀಕರಣ, ಭೂಮಿ ದಾಖಲೆಗಳ ಮಾಹಿತಿ ಹಾಗೂ ಇತರೆ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಿ ಸರಿಪಡಿಸಿ ಯೋಜನೆಯ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕಚೇರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.