ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ

 ದಾವಣಗೆರೆ, ಸೆ. 30 – ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 ಸಂಚಾರಿ ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿಗಳು, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ದಾವಣಗೆರೆ ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

error: Content is protected !!