ದಾವಣಗೆರೆ, ಸೆ. 29 – ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸ ಲಾಗುವ ಎಂ.ಸಿ.ಸಿ ಬಿ. ಬ್ಲಾಕ್ನಲ್ಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ಗೆ ರಾತ್ರಿ ಭೇಟಿ ನೀಡಿ ಶುಚಿತ್ವ, ಊಟೋಪಚಾರ, ಮೆನು ಅನ್ವಯ ನೀಡಲಾಗುತ್ತಿರುವ ಆಹಾರದ ಬಗ್ಗೆ ಮತ್ತು ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಚನ್ನಾಗಿ ವ್ಯಾಸಂಗ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಹೆಸರು ತರುವಂತಾಗಬೇಕೆಂದು ತಿಳಿಸಿ ಹಾಸ್ಟೆಲ್ನಲ್ಲಿ ಯಾವುದೇ ತರದ ಕುಂದುಕೊರತೆಗಳಿದ್ದಲ್ಲಿ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಉಪಸ್ಥಿತರಿದ್ದರು.