ಎಂಬ್ರಾಯಿಡರಿ, ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಸೆ. 30- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿ ರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋ ಬರ್ 8 ಕೊನೆ ದಿನವಾಗಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕ ರವಿಕುಮಾರ್‌ ತಿಳಿಸಿದ್ದಾರೆ.

error: Content is protected !!