ದಾವಣಗೆರೆ, ಅ.1- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರ ವಿರುದ್ಧ ಜೆಡಿಎಸ್ ವತಿಯಿಂದ ನಾಡಿದ್ದು ದಿನಾಂಕ 3 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಕಾರ್ಯಾಧ್ಯಕ್ಷ ಟಿ. ಗಣೇಶ ದಾಸಕರಿಯಪ್ಪ ತಿಳಿಸಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಹರಿಹರ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.