ದಾವಣಗೆರೆ, ಅ. 3- ರಾಜ್ಯದ ಸರ್ಕಾರಿ ಪದವಿ ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿದೆ. ಹಿಂದಿನ ವರ್ಷದ ಉಪನ್ಯಾಸಕರನ್ನು ಮುಂದುವರೆಸಲು ಸರ್ಕಾರ ನೀಡಿರುವ ಆದೇಶ ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ ಜಿಲ್ಲಾ ಕಾರ್ಯದರ್ಶಿ ಟಿ.ಎಸ್. ಸುಮನ್ ತಿಳಿಸಿದ್ದಾರೆ.
January 21, 2025