ಹರಿಹರದಲ್ಲಿ ನಾಳೆ ಪದಗ್ರಹಣ ಸಮಾರಂಭ

ಹರಿಹರ,ಅ.4- ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಸೋಮನಗೌಡ ಪಾಟೀಲ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪರಮೇಶ್ವರ ಪಟ್ಟಣ್ಣ ಶೆಟ್ಟಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಅ.6 ರಂದು ಬೆಳಗ್ಗೆ 11ಕ್ಕೆ ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ.

ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ವಚನಾನಂದ ಶ್ರೀಗಳು, ಅಲಗೂರು ಪಂಚಮಸಾಲಿ ಜಗದ್ಗುರು ಪೀಠದ ಮಹಾದೇವ ಶ್ರೀಗಳು ಸಾನ್ನಿಧ್ಯ ವಹಿಸುವರು. ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಅಧ್ಯಕ್ಷತೆ ವಹಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಸಚಿವರಾದ ಶಿವಾನಂದ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಸಿ.ಸಿ.ಪಾಟೀಲ್, ಎಂ.ಆರ್.ಪಾಟೀಲ್,  ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ವಿನಯ್ ಕುಲಕರ್ಣಿ, ಶಂಕರ್ ಪಾಟೀಲ್ ಮುನೆನಕೊಪ್ಪ, ಗಡಿನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ,  ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಎಸ್.ಕಾಶಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. 

ನಿಯೋಜಿತ ಅಧ್ಯಕ್ಷ ಸೋಮನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಹೆಚ್.ಪಿ. ಪರಮೇಶ್ವರಪ್ಪ, ಬಾವಿ ಬೆಟ್ಟಪ್ಪ, ಬಸವರಾಜ್ ದಿಂಡೂರು, ಬಿ.ನಾಗನಗೌಡ್ರು, ಪೀಠದ ಆಡಳಿತಾಧಿಕಾರಿ ಡಾ. ಹೆಚ್.ಪಿ. ರಾಜ್‌ಕುಮಾರ್ ಸೇರಿದಂತೆ ಸಮಾಜದ ಜನಪ್ರತಿನಿಧಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ ಅಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರುಗಳು ಆಗಮಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು  ಕೊರಿದ್ದಾರೆ. 

error: Content is protected !!