ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭವು ಇಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟನೆ ನೆರವೇರಿಸಲಿದ್ದು, ದಾವಣಗೆರೆ ತಾಲ್ಲೂಕು ಅಧ್ಯಕ್ಷರಾದ ವಿಶ್ವನಾಥ್ ಮಂಡಲೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ, ಭಕ್ತರಹಳ್ಳಿ ಭೈರೇಗೌಡ, ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರನಾಯ್ಕ, ಶಿವಮೂರ್ತಪ್ಪ, ಆರ್.ಸಿ. ಕಲ್ಲೇಶಪ್ಪ, ಅಗಸನಕಟ್ಟೆ ಸಿ.ಬಿ. ಕೊಟ್ರಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
January 5, 2025