ದಾವಣಗೆರೆ, ಅ.8- ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ಕಟ್ಟಡ ನಿರ್ಮಾಣವಾಗುತ್ತಿರುವುದು ಕಂಡು ಬಂದಿದ್ದು ಅನಧಿಕೃತ, ಅಕ್ರಮ ಕಟ್ಟಡ ನಿರ್ಮಾಣ ಕಾಮಗಾರಿ ಕಂಡುಬಂದಲ್ಲಿ, ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ವಶಪಡಿಸಿಕೊಂಡು ಕೆ.ಎಂ.ಸಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಆನ್ಲೈನ್ ತಂತ್ರಾಂಶದಲ್ಲಿ ಕಟ್ಟಡ ಪರವಾನಿಗೆ ಅರ್ಜಿಗಳನ್ನು ಸ್ವೀಕರಿಸಿ ನಿಯಮಾನುಸಾರವಾಗಿ ಕಟ್ಟಡ ಪರವಾನಿಗೆ ನೀಡಲು ಕ್ರಮವಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ನಗರ ಯೋಜನಾ ಶಾಖೆ ಸಂಪರ್ಕಿಸಲು ತಿಳಿಸಿದ್ದಾರೆ.
December 30, 2024