ಹರಿಹರ, ಅ. 8- ನಗರದಲ್ಲಿ ತಡ ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು ಹಲವಾರು ಮನೆಗಳಿಗೆ ನೀರು ನುಗ್ಗಿದ ಘಟನೆ ನಡೆಯಿತು. ರಾತ್ರಿ 1 ಗಂಟೆಯ ಸುಮಾರಿಗೆ ಗುಡುಗು ಮಿಂಚಿನಿಂದ ಕೂಡಿದ ಮಳೆ ಆರಂಭಗೊಂಡು, ಬಹಳಷ್ಟು ರಭಸವಾಗಿ ಸುಮಾರು 30 ನಿಮಿಷಕ್ಕಿಂತ ಹೆಚ್ಚು ಸಮಯ ಸುರಿದಿದ್ದು, ಹಲವಾರು ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತತೆಯಿಂದ ಕೂಡಿತ್ತು. ಮಳೆಯ ರಭಸದಿಂದಾಗಿ ಬೆಸ್ಕಾಂ ಇಲಾಖೆ ಯವರು ವಿದ್ಯುತ್ ಸಂಪರ್ಕವನ್ನು ಕಡಿತಗೊ ಳಿಸಿದ್ದು, ಜನರು ಕತ್ತಲೆಯಲ್ಲಿ ರಾತ್ರಿ ಕಳೆಯುವಂತಾಗಿತ್ತು. ಕೆಲವು ಕಡೆಗಳಲ್ಲಿ ಮರಗಳು ನೆಲಕ್ಕೆ ಉರುಳಿ ಬಿದ್ದು ವಾಹನಗಳ ಓಡಾಟಕ್ಕೆ ತೊಂದರೆಗಳು ಆಗಿತ್ತು.
January 3, 2025