ದಾವಣಗೆರೆ, ಅ.13 – ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖಾ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
January 2, 2025