ದಾವಣಗೆರೆ, ಅ. 13 – ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನ ದವರಾಗಿರಬೇಕು. ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಇದೇ ದಿನಾಂಕ 25 ರೊಳಗೆ ಸಲ್ಲಿಸಬೇಕು. ವಿವರಕ್ಕೆ ಸಂಪರ್ಕಿಸಿ : 08192-237480.