20 ರಂದು ಉದ್ಯೋಗ ಮೇಳ

ದಾವಣಗೆರೆ, ಅ. 14 – ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಇದೇ ದಿನಾಂಕ 20 ರಂದು  ಕೆಎಲ್‍ಎಫ್ ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾ ಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ  100ಕ್ಕೂ ಹೆಚ್ಚಿನ ಬೃಹತ್, ಮಧ್ಯಮ ಹಾಗೂ ಸಣ್ಣ ಉದ್ಯೋಗ ದಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.in/ ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್. ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.

error: Content is protected !!