ದಾವಣಗೆರೆ, ಅ.27- ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಬರುವ ನವೆಂಬರ್ 5ರ ಬೆಳಗ್ಗೆ 9.30ಕ್ಕೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿಕಲ ಚೇತನ ಮಕ್ಕಳ ವೈದ್ಯಕೀಯ ತಪಾಸಣೆ ಮತ್ತು ಸಾಧನ ಸಲಕರಣೆಗಳ ಮೌಲ್ಯಾಂಕನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರಕ್ಕೆ ಹರಿಹರ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿಯ ವಿಕಲ ಚೇತನ ಮಕ್ಕಳನ್ನು ಶಿಬಿರಕ್ಕೆ ಕರೆ ತರುವ ಮೂಲಕ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.
March 19, 2025