ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಾಳೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ, ಅ.24 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ನಾಡಿದ್ದು ದಿನಾಂಕ 26 ಮತ್ತು 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.

ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಜಿಲ್ಲೆಯಲ್ಲಿ ನಾಡಿದ್ದು 26 ರಂದು 5 ಕೇಂದ್ರಗಳಲ್ಲಿ ಮತ್ತು ದಿನಾಂಕ 27 ರಂದು 38 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮತ್ತು ಇತರರು  ಉಪಸ್ಥಿತರಿದ್ದರು.

error: Content is protected !!