ದಾವಣಗೆರೆ,ಅ. 24- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16ರಂದು ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಸರ್ಕಾರಿ ಬಾಲಕರ ಪದವಿ-ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಇದೇ ದಿನಾಂಕ 28 ರಿಂದ ನವೆಂಬರ್ 7ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನವೆಂಬರ್ 8 ರಂದು ನಾಮಪತ್ರಗಳ ಪರಿಶೀಲನೆ, ನ.11 ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣಾಧಿಕಾರಿ ಜಿ.ಹಾಲೇಶಪ್ಪ ತಿಳಿಸಿದ್ದಾರೆ.
January 19, 2025