ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಗರದಲ್ಲಿ ಇಂದು ಸ್ಪರ್ಧಾತ್ಮಕ ಪರೀಕ್ಷೆ

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಇಂದು ಮತ್ತು ನಾಳೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು 5 ಕೇಂದ್ರಗಳಲ್ಲಿ ಮತ್ತು ನಾಳೆ ಭಾನುವಾರ 38 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇಂದು 5 ಪರೀಕ್ಷಾ ಕೇಂದ್ರಗಳಲ್ಲಿ 2090 ಅಭ್ಯರ್ಥಿಗಳು, ನಾಳೆ 17920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿ ದ್ದಾರೆ. ಇಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಡ್ಡಾಯ ಕನ್ನಡ ಭಾಷೆ ನಾಳೆ ಬೆಳಿಗ್ಗೆ 10-30ರಿಂದ12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2-30ರಿಂದ ಸಂಜೆ 4.30 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.

error: Content is protected !!