ದಾವಣಗೆರೆ, ಅ.25- ಬಸವಾಪಟ್ಟಣ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ದಾವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಂಯುಕ್ತಾಶ್ರಯದಲ್ಲಿ ನಾಳೆ ದಿನಾಂಕ 26 ರ ಶನಿವಾರ ಕಾಲೇಜಿನ ಮೈದಾನದಲ್ಲಿ 2024- 25 ನೇ ಸಾಲಿನ ದಾವಣಗೆರೆ ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆ, ದಾವಣಗೆರೆ ವಿವಿ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಮಂಜಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಳೆ ದಿನಾಂಕ 26 ರ ಶನಿವಾರ ಬೆಳಿಗ್ಗೆ 6 ಗಂಟೆಗೆ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.
ಶಾಸಕ ಕೆ.ಎಸ್.ಬಸವಂತಪ್ಪ ಸ್ಪರ್ಧೆಗೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಬಸವಾಪಟ್ಟಣದ ಗ್ರಾ.ಪಂ. ಅಧ್ಯಕ್ಷ ಬಿ.ಜಿ. ಸಚಿನ್, ಉಪಾಧ್ಯಕ್ಷೆ ಕುಸುಮಾ ಬಸವರಾಜಪ್ಪ, ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ವೀರೇಂದ್ರ, ದಾವಣಗೆರೆ ವಿವಿ ಕ್ರೀಡಾಧಿಕಾರಿ ಡಾ. ಬಿ.ಹೆಚ್. ವೀರಪ್ಪ, ಬಸವಾಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರಾದ ಡಾ. ಡಿ. ಆಶಾ ಮತ್ತಿತರರು ಭಾಗವಹಿಸುವರು. ಪ್ರಾಚಾರ್ಯ ಡಾ.ಟಿ. ಮಂಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಎಸ್.ಬಸವಂತಪ್ಪ ಬಹುಮಾನ ವಿತರಣೆ ಮಾಡು ವರು. ಗ್ರಾ.ಪಂ. ಅಧ್ಯಕ್ಷ ಬಿ.ಜಿ. ಸಚಿನ್, ಉಪಾಧ್ಯಕ್ಷೆ ಕುಸುಮಾ ಬಸವರಾಜಪ್ಪ, ದಾವಣಗೆರೆ ಶಿಕ್ಷಣ ನಿಕಾಯ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ (ಪ್ರಭಾರಿ) ಹಾಗೂ ಡೀನ್ ಡಾ. ಕೆ. ವೆಂಕಟೇಶ್, ದಾವಣಗೆರೆ ವಿವಿ ದೈಹಿಕ ನಿರ್ದೇಶಕರ ಸಂಘದ ಮಹಿಳಾ ಉಪಾಧ್ಯಕ್ಷೆ ಎಂ.ಆರ್. ರೇಖಾ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿ. ಅಭಯಾ ಪ್ರಕಾಶ್, ಬಸವಾಪಟ್ಟಣದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ. ಆರ್. ಲೋಕೇಶ ಮತ್ತಿತರರು ಆಗಮಿಸಲಿದ್ದಾರೆ.
ಡಾ. ಕೆ.ಎಂ.ವೀರೇಂದ್ರ, ಡಾ. ಡಿ. ಆಶಾ, ಡಾ.ಎಂ.ಆರ್. ರೇಖಾ, ಹರೀಶ್, ಹನುಮಂತ ಇತರರು ಪತ್ರಿಕಾಗೋಷ್ಠಿಯಲ್ಲಿ