ದಾವಣಗೆರೆ,ಅ.28- ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಾವಣಗೆರೆ ಜಿಲ್ಲಾ ಘಟಕದ ಸಭಾಪತಿ ಗೌಡ್ರ ಚನ್ನಬಸಪ್ಪ ಅವರ ನಿಧನಕ್ಕೆ ರೆಡ್ ಕ್ರಾಸ್ ಸಂಸ್ಥೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ. ರೆಡ್ ಕ್ರಾಸ್ ಸಂಸ್ಥೆಯಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸುವುದರ ಮೂಲಕ ಸಂಸ್ಥೆಗೆ ಅನನ್ಯ ಸೇವೆ ಸಲ್ಲಿಸಿದ್ದ ಚನ್ನಬಸಪ್ಪ ಅವರು ಕೋವಿಡ್ ಸಂದರ್ಭದಲ್ಲಿ ನಿರ್ವಹಿಸಿದ ಸೇವೆ ಶ್ಲ್ಯಾಘನೀಯವಾದದ್ದು ಎಂದು ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
January 2, 2025