ತರಳಬಾಳು ಬಡಾವಣೆಯ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಇಂದು ಸಂಜೆ 6ಕ್ಕೆ ಲಿಂ. ಮಾಗನೂರು ಬಸಪ್ಪನವರ 29ನೇ ವಾರ್ಷಿಕ ಪುಣ್ಯಸ್ಮರಣೆ ಮತ್ತು ಲಿಂ. ಸರ್ವಮಂಗಳಮ್ಮ ಮಾಗನೂರು ಬಸಪ್ಪನವರ 16ನೇ ವಾರ್ಷಿಕ ಪುಣ್ಯಸ್ಮರಣೆ ಹಾಗೂ ಸರ್ವಶರಣ ಸಮ್ಮೇಳನ ನಡೆಯಲಿದೆ. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
October 31, 2024