ದಾವಣಗೆರೆ, ನ.5- ಇಲ್ಲಿನ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಇದೇ ದಿನಾಂಕ 8 ರಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆ ವಹಿಸುವರು.
ಚುನಾವಣಾ ವೇಳಾಪಟ್ಟಿ: ದಿನಾಂಕ 8 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ನಾಮಪತ್ರ ಸ್ವೀಕರಿಸುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದು ಕೊಳ್ಳುವುದು, ಚುನಾವಣೆ ಅಗತ್ಯವಿದ್ದಲ್ಲಿ ಮತದಾನ ಪ್ರಕ್ರಿಯೆ ನಡೆಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.