ದಾವಣಗೆರೆ, ನ.6- ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯ ಅವಧಿಯಲ್ಲಿ ಪ್ರತಿ ತಿಂಗಳು 15 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡಲಿದ್ದು, ತರಬೇತಿಯು 2025ರ ಜನವರಿಯಿಂದ ಪ್ರಾರಂಭವಾಗಲಿದೆ.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ ಪರಿಶಿಷ್ಟ ಜಾತಿಗೆ ಸೇರಿದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಡಿಸೆಂಬರ್ 5 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ 9480841218 ಸಂಪರ್ಕಿಸುವಂತೆ ಹಿರಿಯ ಸಹಾಯಕ ನಿರ್ದೇಶಕ ಬಿ. ಧನಂಜಯ ತಿಳಿಸಿದ್ದಾರೆ.