ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಸೀತಮ್ಮ ಕಾಲೇಜಿನಲ್ಲಿ ಶ್ರೀಮತಿ ಓಂಕಾರಮ್ಮ ಡಿ. ವೀರಪ್ಪ ದತ್ತಿ ಕಾರ್ಯಕ್ರಮದ ವಿಶೇಷ ಉಪನ್ಯಾವಿರುತ್ತದೆ. ಶಾಸಕ ಬಸವರಾಜ್ ವಿ ಶಿವಗಂಗಾ ದತ್ತಿ ದಾನಿಗಳಾಗಿದ್ದಾರೆ. ಪ್ರಾಂಶುಪಾಲ ಟಿ.ಎ ಕುಸಗಟ್ಟಿ ಅಧ್ಯಕ್ಷತೆ ವಹಿಸುವರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಬಿ ಪರಮೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡುವರು. ಕಸಾಪ ಮಾಜಿ ಅಧ್ಯಕ್ಷ ಡಾ. ಮಂಜುನಾಥ ಕುರ್ಕಿ `ವಚನ ಸಾಹಿತ್ಯ ಮತ್ತು ವೈಚಾರಿಕತೆ’ ವಿಷಯವಾಗಿ ಉಪನ್ಯಾಸ ನೀಡುವರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ.ಪಾಲಾಕ್ಷಿ ಬಹುಮಾನ ವಿತರಿಸುವರು. ಅತಿಥಿಗಳಾಗಿ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಗಾಯತ್ರಿ ವಸ್ತ್ರದ್ ಆಗಮಿಸುವರು.
December 24, 2024