ನಗರದಲ್ಲಿಂದು ಆಮ್ ಆದ್ಮಿ ಪಾರ್ಟಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ

ದಾವಣಗೆರೆ, ನ. 13- ನಗರದ ಬೀಡಿ ಲೇಔಟ್‌ನ ಸರ್ಕಾರಿ ಮೌಲಾನ ಆಜಾದ್ ಶಾಲೆಯ ಕಾಮಗಾರಿ ಪುನರಾರಂಭಿಸಬೇಕೆಂದು ಆಗ್ರಹಿಸಿ ನಾಳೆ ದಿನಾಂಕ 14 ರಂದು ಬೆಳಿಗ್ಗೆ 10 ಗಂಟೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಮಗಾರಿಗೆ ಎರಡು ಕೋಟಿ ರೂ. ಮಂಜೂರಾಗಿದ್ದು, ಈಗಾಗಲೇ 90 ಲಕ್ಷದ ಕಾಮಗಾರಿ ಪೂರ್ಣಗೊಂಡಿದೆ. ಈಗ ಆರ್‌ಟಿಐ ಕಾರ್ಯಕರ್ತರು ಕಳಪೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವ ಹಿನ್ನೆಲೆಯಲ್ಲಿ ಕಳೆದ 8 ತಿಂಗಳಿನಿಂದ ಸ್ಥಗಿತಗೊಂಡಿದೆ. ಕಾಮಗಾರಿ ನಡೆಸಲು ಯಾವುದೇ ಅಡಚಣೆ ಇಲ್ಲ ಎಂದು ಲೋಕಾಯುಕ್ತ ನ್ಯಾಯಾಧೀಶರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸಹ ಕಾಮಗಾರಿ ಆರಂಭ ಮಾಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ಎಸ್.ಕೆ. ಆದಿಲ್ ಖಾನ್, ಸುರೇಶ್ ಶಿಡ್ಲಪ್ಪ, ಕೆ. ರವೀಂದ್ರ, ಪ್ರೊ. ಧರ್ಮನಾಯ್ಕ, ಶಬ್ಬೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!