ದಾವಣಗೆರೆ, ನ. 12- ವಕ್ಪ್ ಬೋರ್ಡ್ ಮೂಲಕ ರಾಜ್ಯದ ಹಿಂದೂಗಳ ಆಸ್ತಿ ಕಬಳಿಸಲು ಯತ್ನಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಿವಿಲ್ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಹೊರಟಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಹಿಂದೆ ಮತಾಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿದ್ದೀರಿ. ಈಗ ಮತ್ತೆ ಬೆಂಕಿ ಹಚ್ಚಲು ಸ್ವತಃ ನೀವೇ ಮುಂದಾಗಿದ್ದೀರಿ. ಓಲೈಕೆ ರಾಜಕಾರಣ ಮಾಡಲು ಇತಿಮಿತಿ ಇರಬೇಕು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಜೋಕೆ ಎಂದವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
December 6, 2024