ಅಂತರರಾಷ್ಟ್ರೀಯ ದತ್ತು ಮಾಸದ ಅಂಗವಾಗಿ ಮಕ್ಕಳ ಕಾನೂನು ಬದ್ದ ದತ್ತು ಕಾರ್ಯಕ್ರಮ ಕುರಿತು ಜಾಥಾವನ್ನು ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಅಧ್ಯಕ್ಷತೆ ವಹಿಸುವರು.
ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಮಕ್ಕಳನ್ನು ಮಾರಾಟ ಮಾಡುವುದು, ಕೊಂಡುಕೊಳ್ಳುವುದು. ಇದಕ್ಕೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕಾರ ನೀಡುವ ಮಧ್ಯವರ್ತಿಗಳನ್ನೊಳಗೊಂಡಂತೆ ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ 5 ವರ್ಷಗಳವರೆಗೂ ಸೆರೆಮನೆ ವಾಸದ ಶಿಕ್ಷೆ ಇರುತ್ತದೆ.
ಈ ಅಪರಾಧದಲ್ಲಿ ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳು ಭಾಗಿಯಾಗಿದ್ದಲ್ಲಿ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಲಾಗುತ್ತದೆ. ಆದ್ದರಿಂದ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098/112, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.