ನಗರದಲ್ಲಿ ಇಂದು ಮಕ್ಕಳ ದಿನಾಚರಣೆ

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ (ಬೆಂಗಳೂರು), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಕರ್ನಾಟಕ ವಿಜ್ಞಾನ ಪರಿಷತ್ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11.30 ಕ್ಕೆ ಜೆ.ಹೆಚ್.ಪಟೇಲ್ ಬಡಾವಣೆಯ ಜಿಲ್ಲಾ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಜಿ.ಪಂ. ಸಿಇಓ ಡಾ. ಸುರೇಶ್ ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಸ್. ರಾಜಾನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಿಡಿಪಿಐ ಜಿ. ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್. ಕವಿತ, ಕರ್ನಾಟಕ ವಿಜ್ಞಾನ ಪರಿಷತ್ ದಾವಣಗೆರೆ ಘಟಕದ ಕಾರ್ಯದರ್ಶಿ ಎಂ. ಗುರುಸಿದ್ಧಸ್ವಾಮಿ ಭಾಗವಹಿಸಲಿದ್ದಾರೆ. 

error: Content is protected !!