ಬಾಡಾ ಕ್ರಾಸ್ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಬೆಳಿಗ್ಗೆ 11.30 ಗಂಟೆಗೆ 285ನೇ ಗೌರಿ ಹುಣ್ಣಿಮೆ ಶಿವಾನುಭವ ಗೋಷ್ಠಿ ನಡೆಯಲಿದೆ. ಸಾನ್ನಿಧ್ಯವನ್ನು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಮತ್ತು ಶ್ರೀ ಕಲ್ಲಯ್ಯಜ್ಜ ವಹಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ, ಡಾ. ಅಥಣಿ ಎಸ್. ವೀರಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯಅತಿಥಿಗಳಾಗಿ ಶ್ರೀಮತಿ ಶಶಿಕಲಾ ಮೂರ್ತಿ, ಎಸ್.ಕೆ. ವೀರಣ್ಣ ಉಪಸ್ಥಿತರಿರುವರು. ವೀರೇಶ್ವರ ಪುಣ್ಯಾಶ್ರಮದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ. ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಬರುವ ಡಿಸೆಂಬರ್ 2 ರ ಸೋಮವಾರ ಸಂಜೆ 5 ಗಂಟೆಗೆ ಕಾರ್ತಿಕ ಪೂಜೆ ನೆರವೇರಿಸಲಾಗುವುದು.