ನಗರದಲ್ಲಿ ಇಂದು ವಿಕರವೇಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ದಾವಣಗೆರೆ, ನ. 15- ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಳೆ ದಿನಾಂಕ 16 ರ ಸನಿವಾರ ಸಂಜೆ 6 ಗಂಟೆಗೆ ನಗರದ ಶಿವಯೋಗಾಶ್ರಮದ ಆವರಣದಲ್ಲಿ 66 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು ಎಂದು ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ದೊಡ್ಡಮನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವ ಎಸ್.ಎಸ್. ಮಲ್ಲಿಕಾ ರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭುವನೇಶ್ವರಿ ಭಾವಚಿತ್ರ ಅನಾವರಣ ಮಾಡಲಿದ್ದಾರೆ.

ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಜಿ.ಎನ್. ಗಂಗಾಧರಸ್ವಾಮಿ, ಎಸ್ಸಿ ಉಮಾ ಪ್ರಶಾಂತ್, ಮೇಯರ್ ಕೆ. ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾ  ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್.ಬಡದಾಳ್, ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಮುಂತಾದವರು ಭಾಗವಹಿಸಲಿದ್ದಾರೆಂದರು.

ಇದೇ ವೇಳೆ ವಿವಿದ ಕ್ಷೇತ್ರಗಳಲ್ಲಿ ಸಾಧನೆೈಗೈದ ಹಿರಿಯ ಪತ್ರಕರ್ತ ರಮೇಶ ಜಹಗೀರ್‌ದಾರ್, ಶಿವರಾಜ್ ಈಳಿಗೇರ್, ಜೆ.ಎಸ್. ವೀರೇಶ್ ಸೇರಿದಂತೆ ಅನೇಕರನ್ನು ಗೌರವಿಸಲಾಗುವುದು. ವೇದಿಕೆ ಕಾರ್ಯಕ್ರಮದ ನಂತರ ಭಾರತಿ ವಾದ್ಯವೃಂದದವರಿಂದ ರಸಮಂಜರಿ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ನೀಡಿದರು. 

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಅಮ್ಜದ್ ಅಲಿ, ದಯಾನಂದ್, ಬಿ. ಬಾಬುರಾವ್, ಸಿದ್ದೇಶ್, ಮಹಾಲಿಂಗಪ್ಪ, ಎಂ. ರವಿ, ಮಂಜುನಾಥ್, ಗದಿಗೆಪ್ಪ, ಚಂದ್ರು ಉಪಸ್ಥಿತರಿದ್ದರು. 

error: Content is protected !!