ಆರ್.ಎಲ್. ಕಾನೂನು ಕಾಲೇಜ್ ವತಿಯಿಂದ ಎ.ವಿ.ಕೆ. ಕಾಲೇಜು ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ದವನ ಕಾಲೇಜಿನ ಪ್ರಾಚಾರ್ಯ ಪ್ರೊ. ಬಾತಿ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಚಾರ್ಯ ಡಾ. ಜಿ.ಎಸ್.ಯತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ನಿವೃತ್ತ ಪ್ರಾಧ್ಯಾಪಕ ಎ.ಬಿ. ರಾಮಚಂದ್ರ, ವಕೀಲರ ಸಂಘದ ಜಿಲ್ಲಾದ್ಯಕ್ಷ ಎಲ್.ಹೆಚ್. ಅರುಣ್ಕುಮಾರ್, ಸಹಾಯಕ ಪ್ರಾಧ್ಯಾಪಕ ರಾದ ಬಸವನಗೌಡ ಬಿ.ಪಿ., ವಿದ್ಯಾಧರ ವೇದ ವರ್ಮ ಟಿ., ಡಾ. ಪಂಕಜ ಟಿ.ಸಿ., ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.